November 10, 2008
ರಚನೆ: ಕನಕದಾಸರು
ಈತನೀಗ ವಾಸುದೇವನು ಲೋಕದೊಡೆಯ
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ
ದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ
ಧನುಜೆಯಾಳ್ದನಣ್ಣನಯ್ಯನ ಪಿತನ ಮುoದೆ ಕೌರವೇಂದ್ರನ
ಅನುಜೆಯಾಳಿದವನ ಶಿರವ ಕತ್ತರಿಸುತಾ
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದ ರುಕ್ಮನ
ಅನುಜೆಯಾಳಿದವನ ಮೂರ್ತಿಯನ್ನು ನೋಡಿರೋ1
ಕ್ರೂರನಾದ ಫಣಿಪ ಬಾಣ ತರಣಿಜನು ನಿರೀಕ್ಷಿಸಿ ಆಗ
ವೀರನೆಚ್ಚೆಯಸುಗೆ ಒಪ್ಪುತನ್ನು ವೀಕ್ಷಿಸಿ
ಧಾರಿಣಿಯ ಪದದೊಳoಗಿ ಚರಣ ಭಜಕ ನರನ ಕಾಯ್ದ
ಭಾವಕಲ್ಪನಾದದೇವ ಈತ ನೋಡಿರೋ2
ವ್ಯೋಮಕೇಶಯಿಪ್ಪದೆಸೆಯ ಆ ಮಹಾಮಹಿಮೆಯುಳ್ಳ
ಸಾಮಜವನು ಏರಿ ಬರುವ ಶಕ್ತಿಯನೀಕ್ಷಿಸಿ
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ
ಸಾರ್ವಭೌಮ ಬಡದಾದಿಕೇಶವನ್ನ ನೋಡಿರೋ3
Sri VidyaBhushana ಅವರು ಹಾಡಿರುವುದನ್ನು ಕೇಳಿ - Audio link(song 1)
ಕನ್ನಡ ಚಲನಚಿತ್ರ "ಭಕ್ತ ಕನಕದಾಸ" ದಲ್ಲಿ ಈ ಹಾಡನ್ನು ಚಿತ್ರ ಗೀತೆಯಾಗಿ ಅಳವಡಿಸಿದ್ದಾರೆ. P.B.Srinivas ಅವರ ಧ್ವನಿಯಲ್ಲಿ ಈ ಹಾಡನ್ನು ಕೇಳಿ.
1 comments:
Thanks Akka, for the lyrics
Post a Comment