November 5, 2008
ರಚನೆ:ಕನಕದಾಸರು
ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ
ನಿಮ್ಮೊಳಗಿಹನಾರಮ್ಮಾ [ಪಲ್ಲವಿ]
ಕಮ್ಮಗೋಲನ ವೈರಿ ಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೇ [ಅನುಪಲ್ಲವಿ]
ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ
ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ [೧]
ಉಟ್ಟದಟ್ಟಿಯು ಬಿಗಿದುಟ್ಟ ಚೆಲ್ಲಣದ ದಿಟ್ಟ ತಾ ನಿವನಾರಮ್ಮ
ಪಟ್ಟದ ರಾಣಿ ಪಾರ್ವತಿಯ ಕುಮಾರನು ಹೊಟ್ಟೆಯ ಗಣನಾಥನೇ[ ೨]
ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನಾರಮ್ಮ
ಲೇಸಾಗಿ ಜನರ ಸಲಹುವ ಕಾಗಿನೆಲೆ ಆದಿಕೇಶವ ದಾಸ ಕಣೇ [೩ ]
1.Audio Link by Vidya Bhushana(song 5)
2.Audio Link by Parameshwara hegde (song 5)
3.Audio Link by M.S.Sheela(song 1)
0 comments:
Post a Comment