March 29, 2009
ರಚನೆ : ಪುರಂದರ ದಾಸರು ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ರಾಗ : ನಾಟ ಕುರಂಜಿ
ತಾಳ : ಆದಿ
ಭಾಷೆ : ಕನ್ನಡ
ಎಲ್ಲಿಲ್ಲಿ ನೋಡಿದರೂ ಅಲ್ಲಿ ಶ್ರೀರಾಮ||ಪಲ್ಲವಿ||
ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ||೧||
ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳೀಪರಿ ರುಪ ಉಂಟೆ
ಲವ ಮಾತ್ರದಿ ಅಸುರ ದುರುಳರೆಲ್ಲರು
ಅವರವರು ಹೊಡೆದಾಡಿ ಹತರಾಗಿ ಹೋದರು ||೨||
ಹನುಮದಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಹರುಷದಿಂದ
ಕ್ಷಣದಲ್ಲಿ ಪುರಂದರ ವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ||೩||
1.AudioLink - by Balamurali Krishna
2.AudioLink- by Nagavalli Nagaraja below
1 comments:
Very good work. Jai Sriram. lets god bless all of us. Sarve Jana Sukhinobhavanthu, Vishwa Shaanthi Praapthirasthu. Jai Sriram.
Post a Comment