Welcome to my Blog.I hope you enjoy the music.Please leave your comments and suggestions. Thankyou :)
All songs posted here have audio links!!

Pankaja Mukhiyarellaru bandu / ಲಕ್ಷ್ಮೀ ವೆಂಕಟರಮಣಗೆ ಆರತಿ

November 20, 2009


ರಚನೆ : ಪುರಂದರ ದಾಸರು
(ಲಕ್ಷ್ಮೀ ವೆಂಕಟರಮಣ/ದಶಾವತಾರ ಆರತಿ)


ಪಲ್ಲವಿ:
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ

ಚರಣ:
ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಷ್ಮೀ ನರಸಿಂಹಗಾರತಿ ಎತ್ತಿರೆ(1)


ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ

ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ(2)


ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ
ಭಕ್ತರ ಸಲಹುವ ಪುರಂದರ ವಿಠಲಗೆ ಮುತ್ತೈದೆಯರಾರತಿ ಎತ್ತಿರೆ(3)

Lakshmi Venkataramana aarati / Dashavatara aarti

1.Audio link by Balamurali Krishna

2.Audio Link by Vidya Bhushana

1 comments:

Ishwara Varnasi said...

ನಮಸ್ಕಾರ. ನಿಮ್ಮ ಬ್ಲಾಗ್ ಚೆನ್ನಾಗಿದೆ. ಅಭಿನಂದನೆಗಳು.

stat

Counter

Blog Widget by LinkWithin
 
Bhakthi Geetha / ಭಕ್ತಿ ಗೀತೆಗಳು - by Templates blogger