Welcome to my Blog.I hope you enjoy the music.Please leave your comments and suggestions. Thankyou :)
All songs posted here have audio links!!

Anandamayage Chinmayage aarati ettire / ಆನಂದಮಯಗೆ ಚಿನ್ಮಯಗೆ

November 29, 2009


ರಚನೆ : ವಾದಿರಾಜರು

ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ

ವೇದವ ತಂದು ಬೆಟ್ಟವ ಪೊತ್ತು ಧರಣೀಯ
ಸಾಧಿಸಿ ಕಂಭದಿ ಬಂದವಗೆ
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿ ಮೂರುತಿಗೆ ಆರತಿ ಎತ್ತಿರೆ ೧

ಇಂದುವದನೆ ಸೀತೆ ಸಹಿತಲರಣ್ಯದಿ
ನಂದಗೋಕುಲದಲ್ಲಿ ನಲಿದವಗೆ
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ ೨

ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ ೩


1.Audio Link by Vidya Bhushana

2.Audio Link by Narasimha Nayak (song 4)

0 comments:

stat

Counter

Blog Widget by LinkWithin
 
Bhakthi Geetha / ಭಕ್ತಿ ಗೀತೆಗಳು - by Templates blogger